ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅತಿವೃಷ್ಟಿಯಿಂದ ಬೆಳೆ ನಷ್ಟ ಪರಿಹಾರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

 ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅತಿವೃಷ್ಟಿಯಿಂದ ಬೆಳೆ ನಷ್ಟ ಪರಿಹಾರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಕರ್ನಾಟಕ  ಸರ್ಕಾರ ಮುಂದಾಗಿದೆ. ಐದು ವರ್ಷದ ಬಳಿಕ ಪರಿಹಾರಧನ ಪರಿಷ್ಕರಣೆ ಮಾಡಲಾಗುವುದು , ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳೆ ಹಾನಿ  ಬಗ್ಗೆ ಘೋಷಣೆ ಮಾಡಿದ್ದಾರೆ.



ರಾಜ್ಯದಲ್ಲಿ ಅಂದಾಜು ೭.2೬ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ  ಬಗ್ಗೆ ಅಂದಾಜಿದ್ದು, ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಅಂತೇ ಪ್ರಕಾರ ನೀಡುವ ಪರಿಹಾರ ಏನೇಕೂ  ಸಾಲದು ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಐದು ವರ್ಷದ ನಂತರ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂದು  ಮಾನ್ಯ್ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ , ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು.ಆದರೆ ಆ ಬೆಳೆ ಪರಿಹಾರ ಏನಕ್ಕೂ ಸಾಲಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ ಆದರಿಂದ ನಮ್ಮ ಕಾಂಗ್ರೆಸ್ ಸರ್ಕಾರ ಈ ಬೆಳೇ  ನಷ್ಟ ಪರಿಹಾರವನ್ನು ಹೆಚ್ಚಿಸಲು ನಿರ್ದಾರ ಮಾಡಲಾಗಿದೆ ಎಂದು ಹೇಳಿದರು 



ಸೋಮವಾರ ಜಿಲ್ಲಾಡಳಿತಗಳೊಂದಿಗೆ ಮಳೆ ಹಾನಿ ಬಗ್ಗೆ ವಿಡಿಯೋ ಸಂವಾದ ನಡೆಸಿದ ಮಾನ್ಯ್ ಮುಖ್ಯ ಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ರವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ಎಸ್‌.ಡಿ.ಆರ್.ಎಫ್. ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನಿಗದಿ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸದ್ಯ ವಿಪತ್ತು ನಿರ್ವಹಣಾ ಸೂಚನಿಯಂತೆ  ಪ್ರಸ್ತುತ ಗರಿಷ್ಠ ಎರಡು ಎಕರೆ  ಪ್ರದೇಶದ ಮಿತಿಯ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು  ವಿತರಿಸಲಾಗುವುದು ಎಂದು ಹೇಳಿದರು . ಅದಾದನಂತರ  ಮಳೆಯಾಶ್ರಿತ ಬೆಳೆಗೆ ೯೫೦೦ ರೂ., ನೀರಾವರಿ ಪ್ರದೇಶದ ಬೆಳೆಗೆ ೧೬೫೦೦ ರೂ., ತೋಟಗಾರಿಕೆ ಬೆಳೆಗೆ ೩೨೦೦೦ರೂ. ಮೊತ್ತವನ್ನು ನೀಡಲಾಗುತ್ತಿದೆ.


ಈ ಪರಿಹಾರ ಮೊತ್ತ ಹೆಚ್ಚಳ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅತಿವೃಷ್ಟಿಯಿಂದಾಗಿ ವ್ಯಾಪಕ ಬೆಳೆ ಹಾನಿಯಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಎಸ್‌.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾರ ನೀಡಿದರೆ ರೈತರಿಗೆ ಅನುಕೂಲವಾಗುವುದಿಲ್ಲ ಎನ್ನುವ ಕಾರಣಕ್ಕೆ ಪರಿಹಾರ ಮೊತ್ತ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.





Previous Post Next Post